Asianet Suvarna News Asianet Suvarna News

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂತ್ರಸ್ತೆ!

ಮಂಚದಲ್ಲಿ ಸಹಕರಿಸದಿದ್ದರೆ ಮುಗಿಸಿಬಿಡುತ್ತೇನೆ, ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆ ದೂರು, ಎಸ್‌ಐಟಿಗೆ ಪ್ರಜ್ವಲ್ ರೇವಣ್ಣ ವಿಡಿಯೋ ಸಾಕ್ಷ್ಯ ನೀಡಿದ ದೇವರಾಜೆ ಗೌಡ, ರಾಯಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ, ಮೋದಿ ಮಾತು ನಿಜವಾಯ್ತು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಬ್ಬ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ. ಮಂಚಕ್ಕೆ ಎಳೆದೊಯ್ದು ಗನ್ ಮೂಲಕ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಮೂರನೇ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಅತ್ಯಾಚಾರ ವಿಡಿಯೋ ಚಿತ್ರೀಕರಿಸಿ ಬೆದರಿಸಿದ್ದಾರೆ. ಇದೇ ವಿಡಿಯೋ ಮುಂದಿಟ್ಟುಕೊಂಡು ಪದೇ ಪದೆೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ಪ್ರದ್ವಲ್ ರೇವಣ್ಣ ವಿರುದ್ದ ಇದೀಗ ಒಟ್ಟು 3 ಪ್ರಕರಣಗಳು ದಾಖಲಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀ ವಿಡಿಯೋ ಪ್ರಕರಣ ಬಿಡುಗಡೆ ಮಾಡಿದ್ದು ಯಾರು ಅನ್ನೋ ಪ್ರಶ್ನೆಗೆ ಮೂರು ಹೆಸರು ಕೇಳಿಬರುತ್ತಿದೆ. ಈ ಪೈಕಿ ಹಾಸನದ ಬಿಜೆಪಿ ಮುಖಂಡ ದೇವರಾಜೇ ಗೌಡ ಇಂದು ಎಸ್‌ಐಟಿ ಮುಂದೆ ಹಾಜರಾಗಿ ವಿಡಿಯೋ ಸಾಕ್ಷ್ಯ ಒದಗಿಸಿದ್ದಾರೆ
 

Video Top Stories